ಸಾಹಿತ್ಯ, ಸಂಶೋಧನೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರೊ. ರಾಜಪ್ಪ ದಳವಾಯಿ, ಕನ್ನಡ ನಾಡು-ನುಡಿಯ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ. ಭಾಷೆಯ ಮೇಲಿನ ಅತೀವ ಪ್ರೀತಿ ಮತ್ತು ಸಮಾಜದ ಬಗ್ಗೆ ಇರುವ ಕಾಳಜಿ ಅವರನ್ನು ಒಬ್ಬ ಅಧ್ಯಾಪಕನಾಗಿ, ನಾಟಕಕಾರನಾಗಿ, ವಿಮರ್ಶಕನಾಗಿ, ಸಂಶೋಧಕನಾಗಿ, ಬರಹಗಾರನನ್ನಾಗಿ ರೂಪಿಸಿದೆ.
ಶಿಕ್ಷಣ ಕ್ಷೇತ್ರದಲ್ಲಿ 3 ದಶಕಗಳಿಗೂ ಹೆಚ್ಚಿನ ಅನುಭವ ಹೊಂದಿರುವ ಡಾ.ರಾಜಪ್ಪ ದಳವಾಯಿ, ಕೇವಲ ಬೋಧನೆಗೆ ಸೀಮಿತವಾಗದೆ ಸಾಹಿತ್ಯದ ವಿವಿಧ ಆಯಾಮಗಳಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ. ನಾಟಕ, ಜಾನಪದ ಸಾಹಿತ್ಯ, ವಿಮರ್ಶೆ ಹಾಗೂ ಸಾಮಾಜಿಕ ಚಳುವಳಿಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು, ಈ ನಿಟ್ಟಿನಲ್ಲಿ ಹಲವು ಮಹತ್ವದ ಲೇಖನಗಳನ್ನು ಮತ್ತು ಪುಸ್ತಕಗಳನ್ನು ಪ್ರಕಟಿಸಿದ್ದಾರೆ.